Apocalipse 12

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
1 E viu-se um grande sinal no céu: uma mulher vestida do sol, tendo a lua debaixo dos seus pés, e uma coroa de doze estrelas sobre a sua cabeça.
2 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
2 E estando grávida, gritava com as dores do parto, sofrendo tormentos para dar à luz.
3 ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
3 Viu-se também outro sinal no céu: eis um grande dragão vermelho que tinha sete cabeças e dez chifres, e sobre as suas cabeças sete diademas;
4 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
4 a sua cauda levava após si a terça parte das estrelas do céu, e lançou-as sobre a terra; e o dragão parou diante da mulher que estava para dar à luz, para que, dando ela à luz, lhe devorasse o filho.
5 ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
5 E deu à luz um filho, um varão que há de reger todas as nações com vara de ferro; e o seu filho foi arrebatado para Deus e para o seu trono.
6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
6 E a mulher fugiu para o deserto, onde já tinha lugar preparado por Deus, para que ali fosse alimentada durante mil duzentos e sessenta dias.
7 ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
7 Então houve guerra no céu: Miguel e os seus anjos batalhavam contra o dragão. E o dragão e os seus anjos batalhavam,
8 ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
8 mas não prevaleceram, nem mais o seu lugar se achou no céu.
9 ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
9 E foi precipitado o grande dragão, a antiga serpente, que se chama o Diabo e Satanás, que engana todo o mundo; foi precipitado na terra, e os seus anjos foram precipitados com ele.
10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
10 Então, ouvi uma grande voz no céu, que dizia: Agora é chegada a salvação, e o poder, e o reino do nosso Deus, e a autoridade do seu Cristo; porque já foi lançado fora o acusador de nossos irmãos, o qual diante do nosso Deus os acusava dia e noite.
11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
11 E eles o venceram pelo sangue do Cordeiro e pela palavra do seu testemunho; e não amaram as suas vidas até a morte.
12 ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
12 Pelo que alegrai-vos, ó céus, e vós que neles habitais. Mas ai da terra e do mar! porque o Diabo desceu a vós com grande ira, sabendo que pouco tempo lhe resta.
13 ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
13 Quando o dragão se viu precipitado na terra, perseguiu a mulher que dera à luz o filho varão.
14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
14 E foram dadas à mulher as duas asas da grande águia, para que voasse para o deserto, ao seu lugar, onde é sustentada por um tempo, e tempos, e metade de um tempo, fora da vista da serpente.
15 ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
15 E a serpente lançou da sua boca, atrás da mulher, água como um rio, para fazer que ela fosse arrebatada pela corrente.
16 ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.
16 A terra, porém acudiu à mulher; e a terra abriu a boca, e tragou o rio que o dragão lançara da sua boca.
17 ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
17 E o dragão irou-se contra a mulher, e foi fazer guerra aos demais filhos dela, os que guardam os mandamentos de Deus, e mantêm o testemunho de Jesus.
18 — ausente —
18 E o dragão parou sobre a areia do mar.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Apocalipse 12, comparar traduções ou montar um estudo — tudo direto pelo WhatsApp.