Êxodo 30
Kannada Bible (GL_KANNADA) vs ARC
ARC Almeida Revista e Corrigida 2009
1 ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
1 E farás um altar para queimar o incenso; de madeira de cetim o farás.
2 ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
2 O seu comprimento será de um côvado, e a sua largura, de um côvado; será quadrado, e de dois côvados, a sua altura; e as suas pontas farão uma só peça com ele.
3 ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
3 E com ouro puro o forrarás, o seu teto e as suas paredes ao redor, e as suas pontas; e lhe farás uma coroa de ouro ao redor.
4 ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
4 Também lhe farás duas argolas de ouro debaixo da sua coroa; aos dois lados as farás, de ambas as bandas; e serão para lugares dos varais, com que será levado.
5 ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
5 E os varais farás de madeira de cetim e os forrarás com ouro.
6 ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
6 E o porás diante do véu que está diante da arca do Testemunho, diante do propiciatório que está sobre o Testemunho, onde me ajuntarei contigo.
7 ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
7 E Arão sobre ele queimará o incenso das especiarias; cada manhã, quando põe em ordem as lâmpadas, o queimará.
8 ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
8 E, acendendo Arão as lâmpadas à tarde, o queimará; este será incenso contínuo perante o Senhor pelas vossas gerações.
9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
9 Não oferecereis sobre ele incenso estranho, nem holocausto, nem oferta; nem tampouco derramareis sobre ele libações.
10 ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
10 E uma vez no ano Arão fará expiação sobre as pontas do altar com o sangue do sacrifício das expiações; uma vez no ano fará expiação sobre ele pelas vossas gerações; santíssimo é ao Senhor .
11 ಆಗ ಕರ್ತನು ಮಾತನಾಡಿ ಮೋಶೆಗೆ--
11 Falou mais o Senhor a Moisés, dizendo:
12 ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
12 Quando tomares a soma dos filhos de Israel, conforme a sua conta, cada um deles dará ao Senhor o resgate da sua alma, quando os contares; para que não haja entre eles praga alguma, quando os contares.
13 ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
13 Isto dará todo aquele que passar ao arrolamento: a metade de um siclo, segundo o siclo do santuário (este siclo é de vinte geras); a metade de um siclo é a oferta ao Senhor .
14 ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
14 Qualquer que entrar no arrolamento, de vinte anos para cima, dará a oferta ao Senhor .
15 ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
15 O rico não aumentará, e o pobre não diminuirá da metade do siclo, quando derem a oferta ao Senhor , para fazer expiação por vossas almas.
16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
16 E tomarás o dinheiro das expiações dos filhos de Israel e o darás ao serviço da tenda da congregação; e será para memória aos filhos de Israel diante do Senhor , para fazer expiação por vossas almas.
17 ಕರ್ತನು ಮೋಶೆಗೆ--
17 E falou o Senhor a Moisés, dizendo:
18 ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
18 Farás também uma pia de cobre com a sua base de cobre, para lavar; e a porás entre a tenda da congregação e o altar e deitarás água nela.
19 ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
19 E Arão e seus filhos nela lavarão as suas mãos e os seus pés.
20 ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
20 Quando entrarem na tenda da congregação, lavar-se-ão com água, para que não morram, ou quando se chegarem ao altar para ministrar, para acender a oferta queimada ao Senhor .
21 ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
21 Lavarão, pois, as mãos e os pés, para que não morram; e isto lhes será por estatuto perpétuo, a ele e à sua semente nas suas gerações.
22 ಇದಲ್ಲದೆ ಕರ್ತನು ಮೋಶೆಗೆ--
22 Falou mais o Senhor a Moisés, dizendo:
23 ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
23 Tu, pois, toma para ti das principais especiarias: da mais pura mirra, quinhentos siclos; e de canela aromática, a metade, a saber, duzentos e cinquenta siclos; e de cálamo aromático, duzentos e cinquenta siclos;
24 ಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
24 e de cássia, quinhentos siclos, segundo o siclo do santuário; e de azeite de oliveiras, um him.
25 ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
25 E disto farás o azeite da santa unção, o perfume composto segundo a obra do perfumista; este será o azeite da santa unção.
26 ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
26 E com ele ungirás a tenda da congregação, e a arca do Testemunho,
27 ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
27 e a mesa com todos os seus utensílios, e o castiçal com os seus utensílios, e o altar do incenso,
28 ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
28 e o altar do holocausto com todos os seus utensílios, e a pia com a sua base.
29 ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
29 Assim, santificarás estas coisas, para que sejam santíssimas; tudo o que tocar nelas será santo.
30 ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
30 Também ungirás a Arão e a seus filhos e os santificarás para me administrarem o sacerdócio.
31 ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
31 E falarás aos filhos de Israel, dizendo: Este me será o azeite da santa unção nas vossas gerações.
32 ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
32 Não se ungirá com ele a carne do homem, nem fareis outro semelhante conforme a sua composição; santo é e será santo para vós.
33 ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
33 O homem que compuser tal perfume como este, ou que dele puser sobre um estranho, será extirpado dos seus povos.
34 ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
34 Disse mais o Senhor a Moisés: Toma especiarias aromáticas, estoraque, e ônica, e gálbano; estas especiarias aromáticas e incenso puro de igual peso;
35 ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
35 e disto farás incenso, um perfume segundo a arte do perfumista, temperado, puro e santo;
36 ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
36 e dele, moendo, o pisarás, e dele porás diante do Testemunho, na tenda da congregação, onde eu virei a ti; coisa santíssima vos será.
37 ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.
37 Porém o incenso que farás conforme a composição deste, não o fareis para vós mesmos; santo será para o Senhor .
38 ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
38 O homem que fizer tal como este para cheirar será extirpado do seu povo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 30, comparar traduções ou montar um estudo — tudo direto pelo WhatsApp.