Êxodo 37

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
1 Fez também Bezalel a arca de madeira de cetim; o seu comprimento era de dois côvados e meio; e a sua largura, de um côvado e meio; e a sua altura, de um côvado e meio.
2 ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
2 E cobriu-a de ouro puro por dentro e por fora; e fez-lhe uma coroa de ouro ao redor;
3 ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
3 e fundiu-lhe quatro argolas de ouro aos seus quatro cantos, num lado, duas, e no outro lado, duas argolas;
4 ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
4 e fez varais de madeira de cetim e os cobriu de ouro;
5 ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
5 e meteu os varais pelas argolas aos lados da arca, para levar a arca.
6 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
6 Fez também de ouro puro o propiciatório; o seu comprimento era de dois côvados e meio, e a sua largura, de um côvado e meio.
7 ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
7 Fez também dois querubins de ouro; de obra batida os fez, às duas extremidades do propiciatório;
8 ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
8 um querubim a uma extremidade desta banda, e o outro querubim à outra extremidade da outra banda; do mesmo propiciatório fez sair os querubins às duas extremidades dele.
9 ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
9 E os querubins estendiam as asas por cima, cobrindo com as asas o propiciatório; e os seus rostos estavam defronte um do outro; o rosto dos querubins estava virado para o propiciatório.
10 ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
10 Fez também a mesa de madeira de cetim; o seu comprimento era de dois côvados, e a sua largura, de um côvado, e a sua altura, de um côvado e meio.
11 ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
11 E cobriu-a de ouro puro e fez-lhe uma coroa de ouro ao redor.
12 ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
12 Fez-lhe também uma moldura da largura de uma mão ao redor; e fez uma coroa de ouro ao redor da sua moldura.
13 ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
13 Fundiu-lhe também quatro argolas de ouro; e pôs as argolas aos quatro cantos que estavam aos seus quatro pés.
14 ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
14 Defronte da moldura estavam as argolas para os lugares dos varais, para levar a mesa.
15 ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
15 Fez também os varais de madeira de cetim e os cobriu de ouro, para levar a mesa.
16 ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
16 E fez de ouro puro os utensílios que haviam de estar sobre a mesa, e os seus pratos, e as suas colheres, e as suas escudelas, e as suas cobertas, com que se haviam de cobrir.
17 ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
17 Fez também o castiçal de ouro puro; de obra batida fez este castiçal; o seu pé, e as suas canas, e os seus copos, e as suas maçãs, e as suas flores, na mesma peça.
18 ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
18 Seis canas saíam dos seus lados: três canas do castiçal, de um lado dele, e três canas do castiçal, do outro lado.
19 ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
19 Numa cana, estavam três copos a modo de amêndoas, uma maçã e uma flor; e noutra cana, três copos a modo de amêndoas, uma maçã e uma flor; assim para as seis canas que saíam do castiçal.
20 ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
20 Mas no mesmo castiçal havia quatro copos a modo de amêndoas com as suas maçãs e com as suas flores.
21 ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
21 E era uma maçã debaixo de duas canas do mesmo; e outra maçã debaixo de outras duas canas; e mais uma maçã debaixo de outras duas canas; assim se fez para as seis canas que saíam dele.
22 ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
22 As suas maçãs e as suas canas formavam a mesma peça; tudo era uma obra batida de ouro puro.
23 ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
23 E fez-lhe sete lâmpadas; os seus espevitadores e os seus apagadores eram de ouro puro.
24 ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
24 De um talento de ouro puro o fez, e todos os seus utensílios.
25 ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
25 E fez o altar do incenso de madeira de cetim; de um côvado era o seu comprimento, e de um côvado, a sua largura, quadrado; e de dois côvados, a sua altura; dele mesmo eram feitas as suas pontas.
26 ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
26 E cobriu-o de ouro puro, e a sua coberta, e as suas paredes ao redor, e as suas pontas; e fez-lhe uma coroa de ouro ao redor.
27 ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
27 Fez-lhe também duas argolas de ouro debaixo da sua coroa, nos seus dois cantos, de ambos os seus lados, para os lugares dos varais, para levá-lo com eles.
28 ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
28 E os varais fez de madeira de cetim e os cobriu de ouro.
29 ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
29 Também fez o azeite santo da unção e o incenso aromático, puro, de obra de perfumista.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 37, comparar traduções ou montar um estudo — tudo direto pelo WhatsApp.