Mateus 10

Kannada Bible (GL_KANNADA) vs VC

Sair da comparação
VC Versão Católica
1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
1 Jesus reuniu seus doze discípulos. Conferiu-lhes o poder de expulsar os espíritos imundos e de curar todo mal e toda enfermidade.
2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
2 Eis os nomes dos doze apóstolos: o primeiro, Simão, chamado Pedro; depois André, seu irmão. Tiago, filho de Zebedeu, e João, seu irmão.
3 ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
3 Filipe e Bartolomeu. Tomé e Mateus, o publicano. Tiago, filho de Alfeu, e Tadeu.
4 ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
4 Simão, o cananeu, e Judas Iscariotes, que foi o traidor.
5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
5 Estes são os Doze que Jesus enviou em missão, após lhes ter dado as seguintes instruções: Não ireis ao meio dos gentios nem entrareis em Samaria;
6 ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
6 ide antes às ovelhas que se perderam da casa de Israel.
7 ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
7 Por onde andardes, anunciai que o Reino dos céus está próximo.
8 ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
8 Curai os doentes, ressuscitai os mortos, purificai os leprosos, expulsai os demônios. Recebestes de graça, de graça dai!
9 ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
9 Não leveis nem ouro, nem prata, nem dinheiro em vossos cintos,
10 ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
10 nem mochila para a viagem, nem duas túnicas, nem calçados, nem bastão; pois o operário merece o seu sustento.
11 ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
11 Nas cidades ou aldeias onde entrardes, informai-vos se há alguém ali digno de vos receber; ficai ali até a vossa partida.
12 ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
12 Entrando numa casa, saudai-a: Paz a esta casa.
13 ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
13 Se aquela casa for digna, descerá sobre ela vossa paz; se, porém, não o for, vosso voto de paz retornará a vós.
14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
14 Se não vos receberem e não ouvirem vossas palavras, quando sairdes daquela casa ou daquela cidade, sacudi até mesmo o pó de vossos pés.
15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
15 Em verdade vos digo: no dia do juízo haverá mais indulgência com Sodoma e Gomorra que com aquela cidade.
16 ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
16 Eu vos envio como ovelhas no meio de lobos. Sede, pois, prudentes como as serpentes, mas simples como as pombas.
17 ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
17 Cuidai-vos dos homens. Eles vos levarão aos seus tribunais e açoitar-vos-ão com varas nas suas sinagogas.
18 ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
18 Sereis por minha causa levados diante dos governadores e dos reis: servireis assim de testemunho para eles e para os pagãos.
19 ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
19 Quando fordes presos, não vos preocupeis nem pela maneira com que haveis de falar, nem pelo que haveis de dizer: naquele momento ser-vos-á inspirado o que haveis de dizer.
20 ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
20 Porque não sereis vós que falareis, mas é o Espírito de vosso Pai que falará em vós.
21 ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
21 O irmão entregará seu irmão à morte. O pai, seu filho. Os filhos levantar-se-ão contra seus pais e os matarão.
22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
22 Sereis odiados de todos por causa de meu nome, mas aquele que perseverar até o fim será salvo.
23 ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
23 Se vos perseguirem numa cidade, fugi para uma outra. Em verdade vos digo: não acabareis de percorrer as cidades de Israel antes que volte o Filho do Homem.
24 ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
24 O discípulo não é mais que o mestre, o servidor não é mais que o patrão.
25 ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
25 Basta ao discípulo ser tratado como seu mestre, e ao servidor como seu patrão. Se chamaram de Beelzebul ao pai de família, quanto mais o farão às pessoas de sua casa!
26 ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
26 Não os temais, pois; porque nada há de escondido que não venha à luz, nada de secreto que não se venha a saber.
27 ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
27 O que vos digo na escuridão, dizei-o às claras. O que vos é dito ao ouvido, publicai-o de cima dos telhados.
28 ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
28 Não temais aqueles que matam o corpo, mas não podem matar a alma; temei antes aquele que pode precipitar a alma e o corpo na geena.
29 ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
29 Não se vendem dois passarinhos por um asse? No entanto, nenhum cai por terra sem a vontade de vosso Pai.
30 ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
30 Até os cabelos de vossa cabeça estão todos contados.
31 ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
31 Não temais, pois! Bem mais que os pássaros valeis vós.
32 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
32 Portanto, quem der testemunho de mim diante dos homens, também eu darei testemunho dele diante de meu Pai que está nos céus.
33 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
33 Aquele, porém, que me negar diante dos homens, também eu o negarei diante de meu Pai que está nos céus.
34 ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
34 Não julgueis que vim trazer a paz à terra. Vim trazer não a paz, mas a espada.
35 ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
35 Eu vim trazer a divisão entre o filho e o pai, entre a filha e a mãe, entre a nora e a sogra,
36 ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
36 e os inimigos do homem serão as pessoas de sua própria casa.
37 ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
37 Quem ama seu pai ou sua mãe mais que a mim, não é digno de mim. Quem ama seu filho mais que a mim, não é digno de mim.
38 ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
38 Quem não toma a sua cruz e não me segue, não é digno de mim.
39 ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
39 Aquele que tentar salvar a sua vida, perdê-la-á. Aquele que a perder, por minha causa, reencontrá-la-á.
40 ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
40 Quem vos recebe, a mim recebe. E quem me recebe, recebe aquele que me enviou.
41 ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
41 Aquele que recebe um profeta, na qualidade de profeta, receberá uma recompensa de profeta. Aquele que recebe um justo, na qualidade de justo, receberá uma recompensa de justo.
42 ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
42 Todo aquele que der ainda que seja somente um copo de água fresca a um destes pequeninos, porque é meu discípulo, em verdade eu vos digo: não perderá sua recompensa.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 10, comparar traduções ou montar um estudo — tudo direto pelo WhatsApp.