Números 12
GL_KANNADA vs ARC
ARC Almeida Revista e Corrigida 2009
1 ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
1 E falaram Miriã e Arão contra Moisés, por causa da mulher cuxita, que tomara; porquanto tinha tomado a mulher cuxita.
2 ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
2 E disseram: Porventura, falou o Senhor somente por Moisés? Não falou também por nós? E o Senhor o ouviu.
3 (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
3 E era o varão Moisés mui manso, mais do que todos os homens que havia sobre a terra.
4 ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
4 E logo o Senhor disse a Moisés, e a Arão, e a Miriã: Vós três saí à tenda da congregação. E saíram eles três.
5 ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
5 Então, o Senhor desceu na coluna de nuvem e se pôs à porta da tenda; depois, chamou a Arão e a Miriã, e eles saíram ambos.
6 ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
6 E disse: Ouvi agora as minhas palavras; se entre vós houver profeta, eu, o Senhor , em visão a ele me farei conhecer ou em sonhos falarei com ele.
7 ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
7 Não é assim com o meu servo Moisés, que é fiel em toda a minha casa.
8 ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
8 Boca a boca falo com ele, e de vista, e não por figuras; pois, ele vê a semelhança do Senhor ; por que, pois, não tivestes temor de falar contra o meu servo, contra Moisés?
9 ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
9 Assim, a ira do Senhor contra eles se acendeu; e foi-se.
10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
10 E a nuvem se desviou de sobre a tenda; e eis que Miriã era leprosa como a neve; e olhou Arão para Miriã, e eis que era leprosa.
11 ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
11 Pelo que Arão disse a Moisés: Ah! Senhor meu! Ora, não ponhas sobre nós este pecado, que fizemos loucamente e com que havemos pecado!
12 ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
12 Ora, não seja ela como um morto, que, saindo do ventre de sua mãe, tenha metade da sua carne já consumida.
13 ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
13 Clamou, pois, Moisés ao Senhor , dizendo: Ó Deus, rogo-te que a cures.
14 ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
14 E disse o Senhor a Moisés: Se seu pai cuspira em seu rosto, não seria envergonhada sete dias? Esteja fechada sete dias fora do arraial; e, depois, a recolham.
15 ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.
15 Assim, Miriã esteve fechada fora do arraial sete dias, e o povo não partiu, até que recolheram a Miriã.
16 ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
16 Porém, depois, o povo partiu de Hazerote; e assentaram o arraial no deserto de Parã.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?