Números 15
GL_KANNADA vs ARIB
ARIB Almeida Revisada Imprensa Bíblica
1 ಕರ್ತನು ಮೋಶೆಗೆ--
1 Depois disse o Senhor a Moisés:
2 ಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
2 Fala aos filhos de Israel e díze-lhes: Quando entrardes na terra da vossa habitação, que eu vos hei de dar,
3 ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
3 e ao Senhor fizerdes, do gado eu do rebanho, oferta queimada, holocausto ou sacrifício, para cumprir um voto, ou como oferta voluntária, para fazer nas vossos festas fixas um cheiro suave ao Senhor,
4 ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
4 Então aquele que fizer a sua oferta, fará ao Senhor uma oferta de cereais de um décimo de efa de flor de farinha, misturada com a quarta parte de um him de azeite;
5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
5 e de vinho para a oferta de libação prepararás a quarta parte de um him para o holocausto, ou para o sacrifício, para cada cordeiro;
6 ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
6 e para cada carneiro prepararás como oferta de cereais, dois décimos de efa de flor de farinha, misturada com a terça parte de um him de azeite;
7 ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
7 e de vinho para a oferta de libação oferecerás a terça parte de um him em cheiro suave ao Senhor.
8 ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
8 Também, quando preparares novilho para holocausto ou sacrifício, para cumprir um voto, ou um sacrifício de ofertas pacíficas ao Senhor,
9 ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
9 com o novilho oferecerás uma oferta de cereais de três décimos de efa, de flor de farinha, misturada com a metade de um him de azeite;
10 ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
10 e de vinho para a oferta de libação oferecerás a metade de um him como oferta queimada em cheiro suave ao Senhor.
11 ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
11 Assim se fará com cada novilho, ou carneiro, ou com cada um dos cordeiros ou dos cabritos.
12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
12 Segundo o número que oferecerdes, assim fareis com cada um deles.
13 ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
13 Todo natural assim fará estas coisas, ao oferecer oferta queimada em cheiro suave ao Senhor.
14 ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
14 Também se peregrinar convosco algum estrangeiro, ou quem quer que estiver entre vos nas vossas gerações, e ele oferecer uma oferta queimada de cheiro suave ao Senhor, como vós fizerdes, assim fará ele.
15 ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
15 Quanto à assembléia, haverá um mesmo estatuto para vós e para o estrangeiro que peregrinar convosco, estatuto perpétuo nas vossas gerações; como vós, assim será o peregrino perante o Senhor.
16 ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
16 Uma mesma lei e uma mesma ordenança haverá para vós e para o estrangeiro que peregrinar convosco.
17 ಕರ್ತನು ಮೋಶೆಗೆ ಹೇಳಿದ್ದೇನಂದರೆ--
17 Disse mais o Senhor a Moisés:
18 ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
18 Fala aos filhos de Israel, e dize-lhes: Depois de terdes entrado na terra em que vos hei de introduzir,
19 ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
19 será que, ao comerdes do pão da terra, oferecereis ao Senhor uma oferta alçada.
20 ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
20 Das primícias da vossa massa oferecereis um bolo em oferta alçada; como a oferta alçada da eira, assim o oferecereis.
21 ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
21 Das primícias das vossas massas dareis ao Senhor oferta alçada durante as vossas gerações.
22 ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
22 Igualmente, quando vierdes a errar, e não observardes todos esses mandamentos, que o Senhor tem falado a Moisés,
23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
23 sim, tudo quanto o Senhor vos tem ordenado por intermédio do Moisés, desde o dia em que o Senhor começou a dar os seus mandamentos, e daí em diante pelas vossas gerações,
24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
24 será que, quando se fizer alguma coisa sem querer, e isso for encoberto aos olhos da congregação, toda a congregação oferecerá um novilho para holocausto em cheiro suave ao Senhor, juntamente com a oferta de cereais do mesmo e a sua oferta de libação, segundo a ordenança, e um bode como sacrifício pelo pecado.
25 ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
25 E o sacerdote fará expiação por toda a congregação dos filhos de Israel, e eles serão perdoados; porquanto foi erro, e trouxeram a sua oferta, oferta queimada ao Senhor, e o seu sacrifício pelo pecado perante o Senhor, por causa do seu erro.
26 ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
26 Será, pois, perdoada toda a congregação dos filhos de Israel, bem como o estrangeiro que peregrinar entre eles; porquanto sem querer errou o povo todo.
27 ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
27 E, se uma só pessoa pecar sem querer, oferecerá uma cabra de um ano como sacrifício pelo pecado.
28 ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
28 E o sacerdote fará perante o Senhor expiação pela alma que peca, quando pecar sem querer; e, feita a expiação por ela, será perdoada.
29 ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
29 Haverá uma mesma lei para aquele que pecar sem querer, tanto para o natural entre os filhos de Israel, como para o estrangeiro que peregrinar entre eles.
30 ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
30 Mas a pessoa que fizer alguma coisa temerariamente, quer seja natural, quer estrangeira, blasfema ao Senhor; tal pessoa será extirpada do meio do seu povo,
31 ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
31 por haver desprezado a palavra do Senhor, e quebrado o seu mandamento; essa alma certamente será extirpada, e sobre ela recairá a sua iniqüidade.
32 ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
32 Estando, pois, os filhos de Israel no deserto, acharam um homem apanhando lenha no dia de sábado.
33 ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
33 E os que o acharam apanhando lenha trouxeram-no a Moisés e a Arão, e a toda a congregação.
34 ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
34 E o meteram em prisão, porquanto ainda não estava declarado o que se lhe devia fazer.
35 ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
35 Então disse o Senhor a Moisés: certamente será morto o homem; toda a congregação o apedrejará fora do arraial.
36 ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
36 Levaram-no, pois, para fora do arraial, e o apedrejaram, de modo que ele morreu; como o Senhor ordenara a Moisés.
37 ಕರ್ತನು ಮೋಶೆಗೆ--ಹೇಳಿದ್ದೇನಂದರೆ
37 Disse mais o Senhor a Moisés:
38 ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
38 Fala aos filhos de Israel, e dize-lhes que façam para si franjas nas bordas das suas vestes, pelas suas gerações; e que ponham nas franjas das bordas um cordão azul.
39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
39 Tê-lo-eis nas franjas, para que o vejais, e vos lembreis de todos os mandamentos do Senhor, e os observeis; e para que não vos deixeis arrastar à infidelidade pelo vosso coração ou pela vossa vista, como antes o fazíeis;
40 ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.
40 para que vos lembreis de todos os meus mandamentos, e os observeis, e sejais santos para com o vosso Deus.
41 ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
41 Eu sou o senhor vosso Deus, que vos tirei da terra do Egito para ser o vosso Deus. Eu sou o Senhor vosso Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?