Números 4

GL_KANNADA vs ARIB

Sair da comparação
ARIB Almeida Revisada Imprensa Bíblica
1 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --
1 Disse mais o Senhor a Moisés e a Arão:
2 ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ
2 Tomai a soma dos filhos de Coate, dentre os filhos de Levi, pelas suas famílias, segundo as casas de seus pais,
3 ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
3 da idade de trinta anos para cima até os cinqüenta anos, de todos os que entrarem no serviço para fazerem o trabalho na tenda da revelação.
4 ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.
4 Este será o serviço dos filhos de Coate; na tenda da revelação, no tocante as coisas santíssimas:
5 ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
5 Quando partir o arraial, Arão e seus filhos entrarão e, abaixando o véu do reposteiro, com ele cobrirão a arca do testemunho;
6 ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು.
6 por-lhe-ão por cima uma coberta de peles de golfinhos, e sobre ela estenderão um pano todo de azul, e lhe meterão os varais.
7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
7 Sobre a mesa dos pães da proposição estenderão um pano de azul, e sobre ela colocarão os pratos, as colheres, as tigelas e os cântaros para as ofertas de libação; também o pão contínuo estará sobre ela.
8 ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
8 Depois estender-lhe-ão por cima um pano de carmesim, o qual cobrirão com uma coberta de peles de golfinhos, e meterão à mesa os varais.
9 ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
9 Então tomarão um pano de azul, e cobrirão o candelabro da luminária, as suas lâmpadas, os seus espevitadores, os seus cinzeiros, e todos os seus vasos do azeite, com que o preparam;
10 ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
10 e o envolverão, juntamente com todos os seus utensílios, em uma coberta de peles de golfinhos, e o colocarão sobre os varais.
11 ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
11 Sobre o altar de ouro estenderão um pano de azul, e com uma coberta de peles de golfinhos o cobrirão, e lhe meterão os varais.
12 ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
12 Também tomarão todos os utensílios do ministério, com que servem no santuário, envolvê-los-ão num pano de azul e, cobrindo-os com uma coberta de peles de golfinhos, os colocarão sobre os varais.
13 ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
13 E, tirando as cinzas do altar, estenderão sobre ele um pano de púrpura;
14 ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
14 colocarão nele todos os utensílios com que o servem: os seus braseiros, garfos, as pás e as bacias, todos os utensílios do altar; e sobre ele estenderão uma coberta de peles de golfinhos, e lhe meterão os varais.
15 ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
15 Quando Arão e seus filhos, ao partir o arraial, acabarem de cobrir o santuário e todos os seus móveis, os filhos de Coate virão para levá-lo; mas nas coisas sagradas não tocarão, para que não morram; esse é o cargo dos filhos de Coate na tenda da revelação.
16 ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
16 Eleazar, filho de Arão, o sacerdote, terá a seu cargo o azeite da luminária, o incenso aromático, a oferta contínua de cereais e o óleo da unção; isto é, terá a seu cargo todo o tabernáculo, e tudo o que nele há, o santuário e os seus móveis.
17 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
17 Disse mais o Senhor a Moisés e a Arão:
18 ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
18 Não cortareis a tribo das famílias dos coatitas do meio dos levitas;
19 ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
19 mas isto lhes fareis, para que vivam e não morram, quando se aproximarem das coisas santíssimas: Arão e seus filhos entrarão e lhes designarão a cada um o seu serviço e o seu cargo;
20 ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
20 mas eles não entrarão a ver, nem por um momento, as coisas sagradas, para que não morram.
21 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
21 Disse mais o Senhor a Moisés:
22 ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
22 Toma também a soma dos filhos de Gérsom segundo as casas de seus pais, segundo as suas famílias;
23 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
23 da idade de trinta anos para cima até os cinqüenta os contarás, a todos os que entrarem no serviço para fazerem o trabalho na tenda da revelação.
24 ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
24 Este será o serviço das famílias dos gersonitas, ao servirem e ao levarem as cargas:
25 ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
25 levarão as cortinas do tabernáculo, a tenda da revelação, a sua coberta, a coberta de peles de golfinhos, que está por cima, o reposteiro da porta da tenda da revelação,
26 ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
26 as cortinas do átrio, o reposteiro da porta do átrio, que está junto ao tabernáculo e junto ao altar em redor, as suas cordas, e todos os instrumentos do seu serviço; enfim tudo quanto se houver de fazer no tocante a essas coisas, nisso hão de servir.
27 ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
27 Todo o trabalho dos filhos dos gersonitas, em todo o seu cargo, e em todo o seu serviço, será segundo o mandado de Arão e de seus filhos; e lhes designareis os cargos em que deverão servir.
28 ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
28 Este é o serviço das famílias dos filhos dos gersonitas na tenda da revelação; e o seu trabalho estará sob a direção de Itamar, filho de Arão, o sacerdote.
29 ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
29 Quanto aos filhos de Merári, contá-los-ás segundo as suas famílias, segundo as casas e seus pais;
30 ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
30 da idade de trinta anos para cima até os cinqüenta os contarás, a todos os que entrarem no serviço para fazerem o trabalho da tenda da revelação,
31 ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
31 Este será o seu encargo, segundo todo o seu serviço na tenda da revelação: as armações do tabernáculo e os seus varais, as suas colunas e as suas bases,
32 ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
32 como também as colunas do átrio em redor e as suas bases, as suas estacas e as suas cordas, com todos os seus objetos, e com todo o seu serviço; e por nome lhes designareis os objetos que ficarão a seu cargo.
33 ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
33 Este é o serviço das famílias dos filhos de Merári, segundo todo o seu trabalho na tenda da revelação, sob a direção de Itamar, filho de Arão, o sacerdote.
34 ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
34 Moisés, pois, e Arão e os príncipes da congregação contaram os filhos dos coatitas, segundo as suas famílias, segundo as casas e seus pais,
35 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
35 da idade de trinta anos para cima até os cinqüenta, todos os que entraram no serviço para o trabalho na tenda da revelação;
36 ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
36 os que deles foram contados, pois, segundo as suas famílias, eram dois mil setecentos e cinqüenta.
37 ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
37 Esses são os que foram contados das famílias dos coatitas, isto é, todos os que haviam de servir na tenda da revelação, aos quais Moisés e Arão contaram, conforme o mandado do Senhor por intermédio de Moisés.
38 ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
38 Semelhantemente os que foram contados dos filhos de Gérsom segundo as suas famílias, segundo as casas de seus pais,
39 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
39 da idade de trinta anos para cima até os cinqüenta, todos os que entraram no serviço, para o trabalho na tenda da revelação,
40 ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.
40 os que deles foram contados, segundo as suas famílias, segundo as casas de seus pais, eram dois mil seiscentos e trinta.
41 ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
41 Esses são os que foram contados das famílias dos filhos de Gérsom todos os que haviam de servir na tenda da revelação, aos quais Moisés e Arão contaram, conforme o mandado do Senhor.
42 ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
42 E os que foram contados das famílias dos filhos de Merári, segundo as suas famílias, segundo as casas de seus pais,
43 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
43 da idade de trinta anos para cima até os cinqüenta, todos os que entraram no serviço, para o trabalho na tenda da revelação,
44 ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
44 os que deles foram contados, segundo as suas famílias, eram três mil e duzentos.
45 ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
45 Esses são os que foram contados das famílias dos filhos de Merári, aos quais Moisés e Arão contaram, conforme o mandado do Senhor por intermédio de Moisés.
46 ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
46 Todos os que foram contados dos levitas, aos quais contaram Moisés e Arão e os príncipes de Israel, segundo as suas famílias, segundo as casas de seus pais,
47 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
47 da idade de trinta anos para cima até os cinqüenta, todos os que entraram no serviço para trabalharem e para levarem cargas na tenda da revelação,
48 ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.
48 os que deles foram contados eram oito mil quinhentos e oitenta.
49 ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
49 Conforme o mandado do Senhor foram contados por Moisés, cada qual segundo o seu serviço, e segundo o seu cargo; assim foram contados por ele, como o Senhor lhe ordenara.

Ler em outra tradução

Comparar com outra