2 Reis 14
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC
1 ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.
1 No segundo ano de Jeoás, filho de Jeoacaz, rei de Israel, começou a reinar Amazias, filho de Joás, rei de Judá.
2 ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆರುಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ.
2 Tinha vinte e cinco anos quando começou a reinar e vinte e nove anos reinou em Jerusalém. E era o nome de sua mãe Jeoadã, de Jerusalém.
3 ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.
3 E ele fez o que era reto aos olhos do Senhor , ainda que não como Davi, seu pai; fez, porém, conforme tudo o que fizera Joás, seu pai.
4 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು.
4 Tão somente os altos se não tiraram; porque ainda o povo sacrificava e queimava incenso nos altos.
5 ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.
5 Sucedeu, pois, que, sendo já o reino confirmado na sua mão, matou os seus servos que tinham matado o rei, seu pai.
6 ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
6 Porém os filhos dos matadores não matou, como está escrito no livro da Lei de Moisés, no qual o Senhor deu ordem, dizendo: Não matarão os pais por causa dos filhos, e os filhos não matarão por causa dos pais; mas cada um será morto pelo seu pecado.
7 ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.
7 Amazias feriu a dez mil edomitas no vale do Sal e tomou a Sela na guerra; e chamou o seu nome Jocteel, até ao dia de hoje.
8 ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.
8 Então, Amazias enviou mensageiros a Jeoás, filho de Jeoacaz, filho de Jeú, rei de Israel, dizendo: Vem, vejamo-nos face a face.
9 ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು.
9 Porém Jeoás, rei de Israel, enviou a Amazias, rei de Judá, dizendo: O cardo que está no Líbano enviou ao cedro que está no Líbano, dizendo: Dá tua filha por mulher a meu filho; mas os animais do campo, que estavam no Líbano, passaram e pisaram o cardo.
10 ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.
10 Na verdade, feriste os edomitas, e o teu coração se ensoberbeceu; gloria-te disso e fica em tua casa; e por que te entremeterias no mal, para caíres tu, e Judá contigo?
11 ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು.
11 Mas Amazias não o ouviu; e subiu Jeoás, rei de Israel, e Amazias, rei de Judá, e viram-se face a face em Bete-Semes, que está em Judá.
12 ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು.
12 E Judá foi ferido diante de Israel, e fugiu cada um para a sua tenda.
13 ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.
13 E Jeoás, rei de Israel, tomou a Amazias, rei de Judá, filho de Joás, filho de Acazias, em Bete-Semes, e veio a Jerusalém, e rompeu o muro de Jerusalém, desde a porta de Efraim até à porta da esquina, quatrocentos côvados.
14 ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
14 E tomou todo o ouro, e a prata, e todos os utensílios que se acharam na Casa do Senhor e nos tesouros da casa do rei, como também os reféns; e voltou para Samaria.
15 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.
15 Ora, o mais dos atos de Jeoás, o que fez, e o seu poder, e como pelejou contra Amazias, rei de Judá, porventura, não estão escritos no livro das Crônicas dos Reis de Israel?
16 ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.
16 E dormiu Jeoás com seus pais e foi sepultado em Samaria, junto aos reis de Israel; e Jeroboão, seu filho, reinou em seu lugar.
17 ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು.
17 E viveu Amazias, filho de Joás, rei de Judá, depois da morte de Jeoás, filho de Jeoacaz, rei de Israel, quinze anos.
18 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ.
18 Ora, o mais dos atos de Amazias, porventura, não está escrito no livro das Crônicas dos Reis de Judá?
19 ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.
19 E conspiraram contra ele em Jerusalém, e fugiu para Laquis; porém enviaram após ele homens até Laquis; e estes o mataram ali.
20 ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.
20 E o trouxeram em cima de cavalos e o sepultaram em Jerusalém, junto a seus pais, na Cidade de Davi.
21 ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.
21 E todo o povo de Judá tomou a Azarias, que já era de dezesseis anos, e o fizeram rei em lugar de Amazias, seu pai.
22 ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.
22 Azarias edificou a Elate e a restituiu a Judá, depois que o rei dormiu com seus pais.
23 ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.
23 No décimo quinto ano de Amazias, filho de Joás, rei de Judá, começou a reinar em Samaria Jeroboão, filho de Jeoás, rei de Israel, e reinou quarenta e um anos.
24 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.
24 E fez o que era mal aos olhos do Senhor ; nunca se apartou de nenhum dos pecados de Jeroboão, filho de Nebate, que fez pecar a Israel.
25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.
25 Também este restabeleceu os termos de Israel, desde a entrada de Hamate até ao mar da Planície, conforme a palavra do Senhor , Deus de Israel, a qual falara pelo ministério de seu servo Jonas, filho do profeta Amitai, o qual era de Gate-Hefer.
26 ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.
26 Porque viu o Senhor que a miséria de Israel era mui amarga e que nem havia encerrado, nem livre, nem quem ajudasse a Israel.
27 ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು.
27 E ainda não falara o Senhor em apagar o nome de Israel de debaixo do céu; porém os livrou por mão de Jeroboão, filho de Jeoás.
28 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)
28 Ora, o mais dos atos de Jeroboão, tudo quanto fez, e seu poder, como pelejou e como reconquistou Damasco e Hamate, pertencentes a Judá, sendo rei de Israel, porventura, não estão escritos no livro das Crônicas dos Reis de Israel?
29 ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.
29 E Jeroboão dormiu com seus pais, com os reis de Israel; e Zacarias, seu filho, reinou em seu lugar.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Reis 14, comparar traduções ou montar um estudo — tudo direto pelo WhatsApp.