Ester 5

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
1 Três dias depois Ester se revestiu de seus trajes reais e se apresentou na câmara interior do palácio, diante do aposento real, onde estava o rei sentado sobre seu trono, diante da porta de entrada do edifício.
2 ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.
2 Logo que o rei viu a rainha Ester no átrio, esta conquistou suas boas graças, de sorte que ele estendeu o cetro de ouro que tinha na mão. E Ester se aproximou para tocá-lo.
3 “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.
3 O rei lhe disse: Que tens, rainha Ester e que queres? Mesmo a metade de meu reino eu te daria.
4 ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.
4 Se parecer bem ao rei, respondeu ela, venha hoje com Amã ao banquete que lhe preparo.
5 ಆಗ ಅರಸನು, “ಹಾಮಾನನನ್ನು ಬೇಗನೇ ಕರೆಯಿಸಿರಿ, ಎಸ್ತೇರಳು ಹೇಳಿದಂತೆ ನಾವು ಮಾಡುವೆವು” ಅಂದನು.
5 O rei disse então: Apressai-vos em fazer vir Amã para atender ao desejo de Ester. O rei foi, pois, com Amã ao banquete que Ester tinha preparado.
6 ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.
6 Enquanto se bebia o vinho, o rei disse à rainha: Qual é o teu pedido? Ser-te-á concedido. Que desejas? Mesmo que fosse a metade de meu reino, a receberias.
7 ಅದಕ್ಕೆ ಎಸ್ತೇರಳು, “ನನ್ನ ಬಿನ್ನಹವೇನೆಂದರೆ:
7 Eis, respondeu, meu pedido e meu desejo:
8 ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.
8 se achei graça aos olhos do rei, e se lhe agrada aceder ao meu pedido e cumprir o meu desejo, que o rei e Amã tornem a vir ao banquete que lhes mandarei preparar. Amanhã eu responderei à pergunta do rei.
9 ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ. ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.
9 Amã voltou naquele dia gozoso e alegre de coração. Mas à vista de Mardoqueu que, diante da porta do rei, não se levantava nem se movia à sua passagem, encheu-se de furor contra o judeu.
10 ಆದರೆ ಹಾಮಾನನು ತನ್ನ ಕೋಪವನ್ನು ಹಿಡಿತದಲ್ಲಿಟ್ಟುಕೊಂಡು ತನ್ನ ಮನೆಗೆ ಹೋದನು. ಅಲ್ಲಿ ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆದು
10 Soube, entretanto, conter-se e retirou-se para casa. Então, mandou buscar os seus amigos e Zarés, sua mulher, e
11 ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.
11 lhes falou do esplendor de suas riquezas, do número de seus filhos, de tudo o que tinha feito o rei para exaltá-lo e do lugar que lhe tinha conferido sobre todos os príncipes e todo o pessoal real.
12 “ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.
12 Além disso, acrescentou, fui o único que a rainha Ester admitiu com o rei ao banquete que ela deu e sou ainda convidado para amanhã, com o rei.
13 ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.
13 Mas tudo isso o tenho por nada, enquanto vir esse judeu Mardoqueu na antecâmara do rei.
14 ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲು ಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.”
14 Zarés, sua mulher, e todos os seus amigos lhe disseram: Não há mais que preparar uma forca de cinqüenta côvados de altura. E amanhã cedo pede ao rei que nela seja suspenso Mardoqueu. Depois irás satisfeito ao banquete com o rei. Isso agradou a Amã, e este mandou levantar a forca.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ester 5, comparar traduções ou montar um estudo — tudo direto pelo WhatsApp.