1 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
2 “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ:
3 ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ.
4 ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶಬರ್ಯವನ್ನು ಕೂಡಿಹಾಕಿದ್ದೀ.
5 ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶಬರ್ಯವು ಬೆಳೆಯುವಂತೆ ಮಾಡಿದ್ದೀ.
6 “‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ:
7 ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು.
8 ನಿನ್ನ ಬನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು.
9 ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು.
10 ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು.
11 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,
12 “ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ:
13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ.
14 ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ.
15 ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ.
16 ನಿನ್ನ ವ್ಯಾಪಾರವು ನಿನಗೆ ಐಶಬರ್ಯವನ್ನು ತಂದಿತು.
17 ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು.
18 ನೀನು ಅನೇಕ ತಪ್ಪುಗಳನ್ನು ಮಾಡಿದೆ.
19 “‘ಬೇರೆ ಜನಾಂಗಗಳ ಜನರು
20 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು:
21 “ನರಪುತ್ರನೇ, ಚೀದೋನಿನ ಕಡೆಗೆ ನೋಡಿ ನನ್ನ ಪರವಾಗಿ ನೀನೇ ಅದರ ವಿರುದ್ಧವಾಗಿ ಮಾತನಾಡು.
22 ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು:
23 ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು.
24 “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”
25 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.
26 ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದೆಬಷೀಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”