1 ಆ ಸಮಯದಲ್ಲಿ ನೀನು ಹೀಗೆನ್ನುವೆ:
2 ದೇವರು ನನ್ನನ್ನು ರಕ್ಷಿಸುತ್ತಾನೆ.
3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ.
4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ!
5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ.
6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ.