1 ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.
2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.
3 ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.
4 ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.
5 ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
6 ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.
7 ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.
8 ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.
9 ಜನರು ದ್ರಾಕ್ಷಾರಸ ಕುಡಿಯುತ್ತಿರುವಾಗ ಹಾಡು ಹಾಡುವುದಿಲ್ಲ. ಅವರು ಕುಡಿಯುವ ಮದ್ಯವು ಅವರಿಗೆ ಕಹಿಯಾಗಿದೆ.
10 ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.
11 ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.
12 ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.
13 ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು.
14 ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು.
15 ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ!
16 ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ.
17 ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ.
18 ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು.
19 ಭೂಕಂಪಗಳಾಗುವವು.
20 ಲೋಕದ ಪಾಪವು ತುಂಬಾ ಭಾರವಾಗಿದೆ.
21 ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ
22 ಅನೇಕ ಮಂದಿ ಒಟ್ಟು ಸೇರುವರು.
23 ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು.