1 ಯೆಹೋವನೇ, ನೀನೇ ನನ್ನ ದೇವರು.
2 ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು.
3 ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು.
4 ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ.
5 ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ.
6 ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.
7 ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.
8 ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.
9 ಆ ಸಮಯದಲ್ಲಿ ಜನರು,
10 ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ.
11 ಯೆಹೋವನು ತನ್ನ ಕೈಗಳನ್ನು ಈಜುವವನಂತೆ ಅಗಲವಾಗಿ ತೆರೆದು
12 ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು.