Isaías 40

KAN2010

1 ನಿನ್ನ ದೇವರು ಹೇಳುವುದೇನೆಂದರೆ:

2 ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು,

3 ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ:

4 ತಗ್ಗುಗಳನ್ನು ಸಮತಟ್ಟು ಮಾಡಿರಿ.

5 ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು.

6 ಒಂದು ಸ್ವರವು “ಮಾತನಾಡು” ಎಂದಿತು.

7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು.

8 ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ.

9 ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ.

10 ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ.

11 ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು.

12 ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು?

13 ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ.

14 ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ?

15 ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ.

16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು,

17 ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ.

18 ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ?

19 ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ.

20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು.

21 ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ?

22 ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು.

23 ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು.

24 ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು.

25 ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ?

26 ಆಕಾಶಮಂಡಲದ ಕಡೆಗೆ ನೋಡಿರಿ!

27 ಯಾಕೋಬೇ, ಇದು ಸತ್ಯ!

28 ದೇವರಾದ ಯೆಹೋವನು ಜ್ಞಾನಿಯೆಂಬುದನ್ನು

29 ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ.

30 ಯೌವನಸ್ಥರು ಆಯಾಸಗೊಳ್ಳುವರು.

31 ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು.

Ler em outra tradução

Comparar lado a lado