Joel 1

KAN2010

1 ಪೆತೂವೇಲನ ಮಗನಾದ ಯೋವೇಲನು ಯೆಹೋವನಿಂದ ಈ ಸಂದೇಶವನ್ನು ಪಡೆದನು.

2 ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ.

3 ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ.

4 ಚೂರಿ ಮಿಡತೆ ತಿಂದುಬಿಟ್ಟಿದ್ದನ್ನು

5 ಅಮಲೇರಿದವರೇ, ಎಚ್ಚರಗೊಂಡು ಅಳಿರಿ.

6 ನನ್ನ ಜನಾಂಗಕ್ಕೆ ವಿರುದ್ಧವಾಗಿ ಬಲಶಾಲಿಯಾದ ದೊಡ್ಡ ರಾಜ್ಯವು ಯುದ್ಧಕ್ಕೆ ಬರುವದು.

7 ಆ ಮಿಡತೆಗಳು ನನ್ನ ದ್ರಾಕ್ಷಿತೋಟದ

8 ಮದುಮಗನು ಸತ್ತುಹೋದಾಗ

9 ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ.

10 ಹೊಲಗದ್ದೆಗಳೆಲ್ಲಾ ನಾಶವಾದವು.

11 ರೈತರೇ, ದುಃಖಿಸಿರಿ,

12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ

13 ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ.

14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

15 ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.

16 ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟುಹೋದವು.

17 ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ.

18 ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.

19 ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.

20 ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.

Ler em outra tradução

Comparar lado a lado