1 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ,
2 ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ,
3 ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ,
4 ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು?
5 “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ,
6 ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ.
7 “ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ.
8 ನನ್ನ ‘ಸಾಬಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ.
9 ನನ್ನ ‘ಸಾಬಸ್ತ್ಯವಾದ ಜನರು’ ಹದ್ದುಗಳಿಂದ
10 ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ.
11 ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ.
12 ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು.
13 ಜನರು ಗೋಧಿಯನ್ನು ಬಿತ್ತುವರು;
14 ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.
15 ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸಾಬಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.
16 ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
17 ಯಾವ ಜನಾಂಗವಾದರೂ ನನ್ನ ಸಂದೇಶವನ್ನು ಕೇಳದೆಹೋದರೆ ಅದನ್ನು ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನ್ನು ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಬಂದ ಸಂದೇಶ.