1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.
2 ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.
3 ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”
4 ಇಸ್ರೇಲಿನ ಮತ್ತು ಯೆಹೂದದ ಜನರ ಬಗ್ಗೆ ಯೆಹೋವನು ಈ ಸಂದೇಶವನ್ನು ಕೊಟ್ಟನು:
5 “ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ.
6 “ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ.
7 “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ.
8 ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
9 ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”
10 ಯೆಹೋವನು ಹೀಗೆಂದನು:
11 “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ.
12 ಯೆಹೋವನು ಹೀಗೆನ್ನುತ್ತಾನೆ:
13 ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ.
14 ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ.
15 ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ?
16 ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು.
17 ಇದು ಯೆಹೋವನ ನುಡಿ:
18 ಯೆಹೋವನು ಹೀಗೆನ್ನುತ್ತಾನೆ,
19 ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು.
20 ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು.
21 ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು.
22 ನೀವು ನನ್ನ ಜನರಾಗುವಿರಿ
23 ಯೆಹೋವನು ಬಹಳ ಕೋಪ ತಾಳಿದ್ದನು.
24 ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ