Jeremias 51

KAN2010

1 ಯೆಹೋವನು ಹೀಗೆನ್ನುತ್ತಾನೆ:

2 ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು.

3 ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು.

4 ಕಸ್ದೀಯರ ಪ್ರದೇಶದಲ್ಲಿಯೇ ಬಾಬಿಲೋನಿನ ಸೈನಿಕರನ್ನು ಕೊಲ್ಲಲಾಗುವುದು.

5 ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ.

6 ಬಾಬಿಲೋನಿನಿಂದ ದೂರ ಓಡಿಹೋಗಿರಿ.

7 ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು.

8 ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು.

9 ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು.

10 ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ.

11 ನಿಮ್ಮ ಬಾಣಗಳನ್ನು ಮಸೆಯಿರಿ.

12 ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ.

13 ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ.

14 ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ:

15 ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು.

16 ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ.

17 ಆದರೆ ಜನರು ಬುದ್ಧಿಹೀನರಾಗಿ

18 ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ.

19 ಆದರೆ ಯಾಕೋಬ್ಯರ ಸಾಬಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ.

20 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ.

21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ.

22 ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.

23 ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.

24 ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು.

25 ಯೆಹೋವನು ಹೀಗೆನ್ನುತ್ತಾನೆ:

26 ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು.

27 “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ.

28 ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ.

29 ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ.

30 ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ.

31 ಒಬ್ಬ ಸಂದೇಶಕನ ನಂತರ ಇನ್ನೊಬ್ಬ ಸಂದೇಶಕನು ಬರುವನು.

32 ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ;

33 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು:

34 “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು;

35 ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು.

36 ಯೆಹೋವನು ಹೀಗೆನ್ನುವನು:

37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು.

38 “ಬಾಬಿಲೋನಿನ ಜನರು ಗರ್ಜಿಸುವ ಪ್ರಾಯದ ಸಿಂಹಗಳಂತಿದ್ದಾರೆ.

39 ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ.

40 “ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು.

41 “ಶೇಷಕನು” ಶತ್ರುಗಳ ವಶವಾಗುವನು.

42 ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು.

43 ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು.

44 ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು.

45 ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ.

46 “ನನ್ನ ಜನರೇ, ದುಃಖಿಸಬೇಡಿ,

47 ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು.

48 ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು

49 “ಬಾಬಿಲೋನ್ ಇಸ್ರೇಲರನ್ನು ಕೊಂದಿತು.

50 ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ.

51 “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು.

52 ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು

53 ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು.

54 “ಬಾಬಿಲೋನಿನಲ್ಲಿ ಜನರು ರೋಧಿಸುವದನ್ನು ನಾವು ಕೇಳುವೆವು.

55 ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು.

56 ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು.

57 ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ

58 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು:

59 ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.

60 ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.

61 ಯೆರೆಮೀಯನು ಸೆರಾಯನಿಗೆ ಹೀಗೆ ಹೇಳಿದನು: “ಸೆರಾಯನೇ, ಬಾಬಿಲೋನಿಗೆ ಹೋಗು. ಎಲ್ಲರಿಗೂ ಕೇಳಿಸುವಂತೆ ಈ ಸಂದೇಶವನ್ನು ಖಂಡಿತವಾಗಿ ಓದು.

62 ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’

63 ಈ ಸುರುಳಿಯನ್ನು ಓದಿಮುಗಿಸಿದ ಮೇಲೆ ಅದಕ್ಕೊಂದು ಕಲ್ಲನ್ನು ಕಟ್ಟಿ ಆ ಕಾಗದದ ಸುರುಳಿಯನ್ನು ಯೂಫ್ರೇಟೀಸ್ ನದಿಯಲ್ಲಿ ಎಸೆದುಬಿಡು.

64 ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು.

Ler em outra tradução

Comparar lado a lado