Números 11

KAN2010 vs NAA

Sair da comparação
NAA Nova Almeida Atualizada 2017
1 ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.
1 O povo se queixou de sua sorte aos ouvidos do Senhor . Quando o Senhor ouviu as reclamações, sua ira se acendeu, e fogo do Senhor ardeu entre eles e consumiu algumas extremidades do arraial.
2 ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.
2 Então o povo clamou a Moisés. Este orou ao Senhor , e o fogo se apagou.
3 ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು.
3 Por isso aquele lugar foi chamado de Taberá, porque o fogo do Senhor se havia acendido entre eles.
4 ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?
4 E o populacho que estava no meio deles veio a ter grande desejo das comidas dos egípcios. Também os filhos de Israel começaram a chorar outra vez, dizendo: — Quem nos dará carne para comer?
5 ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.
5 Lembramos dos peixes que comíamos de graça no Egito. Que saudade dos pepinos, dos melões, dos alhos silvestres, das cebolas e dos alhos!
6 ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು.
6 Mas agora a nossa alma está seca, e não vemos nada a não ser este maná.
7 ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು.
7 O maná era como semente de coentro, e a sua aparência era semelhante à de bdélio.
8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.
8 O povo ia por toda parte e o colhia. Eles o moíam em moinhos ou o socavam em pilões. Depois o cozinhavam em panelas e dele faziam bolos. O sabor do maná era como o de bolos amassados com azeite.
9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
9 Quando, de noite, descia o orvalho sobre o arraial, sobre este também caía o maná.
10 ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು.
10 Então Moisés ouviu como o povo chorava por famílias, cada um à porta da sua tenda. O Senhor ficou muito irado, e Moisés também não gostou daquilo.
11 ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?
11 Moisés disse ao Senhor : — Por que fizeste mal a teu servo, e por que não achei favor aos teus olhos, visto que puseste sobre mim a carga de todo este povo?
12 ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?
12 Será que fui eu quem concebeu todo este povo? Será que fui eu quem o deu à luz, para que me digas que o leve no colo, como a babá leva a criança que mama, até a terra que prometeste dar a seus pais?
13 ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
13 Onde eu poderia conseguir carne para dar a todo este povo? Pois chora diante de mim, dizendo: “Dê-nos carne para comer.”
14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.
14 Eu sozinho não posso levar todo este povo, pois é pesado demais para mim.
15 ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.
15 Se me tratas assim, mata-me de uma vez. Se achei favor aos teus olhos, peço que não me deixes ver a minha miséria.
16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.
16 O Senhor disse a Moisés: — Reúna para mim setenta homens dos anciãos de Israel, que você sabe que são anciãos e superintendentes do povo, e traga-os diante da tenda do encontro, para que estejam ali com você.
17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.
17 Então descerei e ali falarei com você. Tirarei do Espírito que está sobre você e o porei sobre eles; e eles ajudarão você a levar a carga do povo, para que você não tenha de levá-la sozinho.
18 “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.
18 Diga ao povo: “Santifiquem-se para amanhã e vocês comerão carne, porque vocês choraram aos ouvidos do Senhor , dizendo: ‘Quem nos dará carne para comer? A vida era melhor no Egito.’” Por isso o Senhor lhes dará carne e vocês poderão comer.
19 ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,
19 Não comerão um dia, nem dois dias, nem cinco, nem dez, nem ainda vinte,
20 ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”
20 mas um mês inteiro, até que saia pelo nariz, até que fiquem com nojo dela, porque vocês rejeitaram o Senhor , que está no meio de vocês, e choraram diante dele, dizendo: “Por que saímos do Egito?”
21 ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ.
21 Moisés, porém, respondeu: — Este povo no meio do qual estou é de seiscentos mil homens em pé, e tu dizes: “Eu lhes darei carne, e eles a comerão durante um mês inteiro.”
22 ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು.
22 Quantos rebanhos de ovelhas e de gado teríamos de matar, para que tivessem o suficiente? Ou será que bastaria, se ajuntássemos para eles todos os peixes do mar?
23 ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.
23 Porém o Senhor respondeu a Moisés: — Será que a mão do
24 ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು.
24 Moisés saiu e contou ao povo as palavras do Senhor . Ele reuniu setenta homens dos anciãos do povo e os pôs ao redor da tenda.
25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.
25 Então o Senhor desceu na nuvem e falou com Moisés. E, tirando do Espírito que estava sobre Moisés, o pôs sobre aqueles setenta anciãos. Quando o Espírito repousou sobre eles, profetizaram; mas isto nunca mais se repetiu.
26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.
26 Porém dois homens ficaram no arraial. Um se chamava Eldade, e o outro, Medade. O Espírito repousou sobre eles, porque estavam entre os inscritos, mesmo que não tivessem ido até a tenda; e profetizavam no arraial.
27 ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.
27 Então um jovem correu e anunciou a Moisés: — Eldade e Medade estão profetizando no arraial.
28 ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)
28 Josué, filho de Num, auxiliar de Moisés, um dos seus escolhidos, respondeu e disse: — Moisés, meu senhor, ordene que parem com isso.
29 ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.
29 Porém Moisés lhe disse: — Você está com ciúmes por mim? Eu gostaria que todo o povo do
30 ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು.
30 Depois, Moisés se recolheu ao arraial, ele e os anciãos de Israel.
31 ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು.
31 Então soprou um vento do Senhor , e trouxe codornizes do mar, e as espalhou pelo arraial em todas as direções, numa extensão de cerca de um dia de caminhada, a uma altura de quase um metro sobre a terra.
32 ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು.
32 Todo aquele dia e toda aquela noite, e também no dia seguinte, o povo se levantou e recolheu as codornizes; o que menos recolheu teve dez montões; e as estenderam para si ao redor do arraial.
33 ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.
33 Enquanto a carne ainda estava entre os seus dentes, antes que fosse mastigada, a ira do Senhor se acendeu contra o povo, e o feriu com uma terrível praga.
34 ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.
34 Por isso aquele lugar foi chamado de Quibrote-Hataavá, porque ali foi sepultado o povo que teve o desejo das comidas dos egípcios.
35 ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು.
35 De Quibrote-Hataavá o povo partiu para Hazerote e ali ficou.

Ler em outra tradução

Comparar com outra