Números 13

KAN2010 vs ARA

Sair da comparação
ARA Almeida Revista e Atualizada 1993
1 ಯೆಹೋವನು ಮೋಶೆಗೆ,
1 Disse o Senhor a Moisés:
2 “ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.
2 Envia homens que espiem a terra de Canaã, que eu hei de dar aos filhos de Israel; de cada tribo de seus pais enviareis um homem, sendo cada qual príncipe entre eles.
3 ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.
3 Enviou-os Moisés do deserto de Parã, segundo o mandado do Senhor ; todos aqueles homens eram cabeças dos filhos de Israel.
4 ಆ ನಾಯಕರು ಯಾರೆಂದರೆ:
4 São estes os seus nomes: da tribo de Rúben, Samua, filho de Zacur;
5 ಸಿಮೆಯೋನ್ ಕುಲದಿಂದ ಹೋರಿಯ ಮಗನಾದ ಶಾಫಾಟ್,
5 da tribo de Simeão, Safate, filho de Hori;
6 ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,
6 da tribo de Judá, Calebe, filho de Jefoné;
7 ಇಸ್ಸಾಕಾರ್ ಕುಲದಿಂದ ಯೋಸೇಫನ ಮಗನಾದ ಇಗಾಲ್,
7 da tribo de Issacar, Jigeal, filho de José;
8 ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,
8 da tribo de Efraim, Oseias, filho de Num;
9 ಬೆನ್ಯಾಮೀನ್ ಕುಲದಿಂದ ರಾಫೂವನ ಮಗನಾದ ಪಲ್ಟೀ,
9 da tribo de Benjamim, Palti, filho de Rafu;
10 ಜೆಬುಲೂನ್ ಕುಲದಿಂದ ಸೋದೀಯ ಮಗನಾದ ಗದ್ದೀಯೇಲ್,
10 da tribo de Zebulom, Gadiel, filho de Sodi;
11 ಯೋಸೇಫನ ಮಗನಾದ ಮನಸ್ಸೆ ಕುಲದಿಂದ ಸೂಸೀಯ ಮಗನಾದ ಗದ್ದೀ.
11 da tribo de José, pela tribo de Manassés, Gadi, filho de Susi;
12 ದಾನ್ ಕುಲದಿಂದ ಗೆಮಲ್ಲೀಯ ಮಗನಾದ ಅಮ್ಮೀಯೇಲ್.
12 da tribo de Dã, Amiel, filho de Gemali;
13 ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,
13 da tribo de Aser, Setur, filho de Micael;
14 ನಫ್ತಾಲಿ ಕುಲದಿಂದ ವಾಪೆಸೀಯನ ಮಗನಾದ ನಹಬೀ,
14 da tribo de Naftali, Nabi, filho de Vofsi;
15 ಗಾದ್ ಕುಲದಿಂದ ಮಾಕೀಯನ ಮಗನಾದ ಗೆಯೂವೇಲ್.
15 da tribo de Gade, Geuel, filho de Maqui.
16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)
16 São estes os nomes dos homens que Moisés enviou a espiar aquela terra; e a Oseias, filho de Num, Moisés chamou Josué.
17 ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ
17 Enviou-os, pois, Moisés a espiar a terra de Canaã; e disse-lhes: Subi ao Neguebe e penetrai nas montanhas.
18 ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ,
18 Vede a terra, que tal é, e o povo que nela habita, se é forte ou fraco, se poucos ou muitos.
19 ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದ್ದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿವೆಯೋ ಅಥವಾ ಇಲ್ಲವೋ,
19 E qual é a terra em que habita, se boa ou má; e que tais são as cidades em que habita, se em arraiais, se em fortalezas.
20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)
20 Também qual é a terra, se fértil ou estéril, se nela há matas ou não. Tende ânimo e trazei do fruto da terra. Eram aqueles dias os dias das primícias das uvas.
21 ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.
21 Assim, subiram e espiaram a terra desde o deserto de Zim até Reobe, à entrada de Hamate.
22 ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.
22 E subiram pelo Neguebe e vieram até Hebrom; estavam ali Aimã, Sesai e Talmai, filhos de Anaque (Hebrom foi edificada sete anos antes de Zoã, no Egito).
23 ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು.
23 Depois, vieram até ao vale de Escol e dali cortaram um ramo de vide com um cacho de uvas, o qual trouxeram dois homens numa vara, como também romãs e figos.
24 ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.
24 Esse lugar se chamou o vale de Escol, por causa do cacho que ali cortaram os filhos de Israel.
25 ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು.
25 Ao cabo de quarenta dias, voltaram de espiar a terra,
26 ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.
26 caminharam e vieram a Moisés, e a Arão, e a toda a congregação dos filhos de Israel no deserto de Parã, a Cades; deram-lhes conta, a eles e a toda a congregação, e mostraram-lhes o fruto da terra.
27 ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.
27 Relataram a Moisés e disseram: Fomos à terra a que nos enviaste; e, verdadeiramente, mana leite e mel; este é o fruto dela.
28 ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.
28 O povo, porém, que habita nessa terra é poderoso, e as cidades, mui grandes e fortificadas; também vimos ali os filhos de Anaque.
29 ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.
29 Os amalequitas habitam na terra do Neguebe; os heteus, os jebuseus e os amorreus habitam na montanha; os cananeus habitam ao pé do mar e pela ribeira do Jordão.
30 ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.
30 Então, Calebe fez calar o povo perante Moisés e disse: Eia! Subamos e possuamos a terra, porque, certamente, prevaleceremos contra ela.
31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.
31 Porém os homens que com ele tinham subido disseram: Não poderemos subir contra aquele povo, porque é mais forte do que nós.
32 “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.
32 E, diante dos filhos de Israel, infamaram a terra que haviam espiado, dizendo: A terra pelo meio da qual passamos a espiar é terra que devora os seus moradores; e todo o povo que vimos nela são homens de grande estatura.
33 ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.
33 Também vimos ali gigantes (os filhos de Anaque são descendentes de gigantes), e éramos, aos nossos próprios olhos, como gafanhotos e assim também o éramos aos seus olhos.

Ler em outra tradução

Comparar com outra