Números 21
KAN2010 vs ARIB
1 ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.
1 Ora, ouvindo o cananeu, rei de Arade, que habitava no Negebe, que Israel vinha pelo caminho de Atarim, pelejou contra Israel, e levou dele alguns prisioneiros.
2 ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.
2 Então Israel fez um voto ao Senhor, dizendo: Se na verdade entregares este povo nas minhas mãos, destruirei totalmente as suas cidades.
3 ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
3 O Senhor, pois, ouviu a voz de Israel, e entregou-lhe os cananeus; e os israelitas os destruíram totalmente, a eles e às suas cidades; e chamou-se aquele lugar Horma.
4 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.
4 Então partiram do monte Hor, pelo caminho que vai ao Mar Vermelho, para rodearem a terra de Edom; e a alma do povo impacientou-se por causa do caminho.
5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
5 E o povo falou contra Deus e contra Moisés: Por que nos fizestes subir do Egito, para morrermos no deserto? pois aqui não há pão e não há água: e a nossa alma tem fastio deste miserável pão.
6 ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.
6 Então o Senhor mandou entre o povo serpentes abrasadoras, que o mordiam; e morreu muita gente em Israel.
7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.
7 Pelo que o povo veio a Moisés, e disse: Pecamos, porquanto temos falado contra o Senhor e contra ti; ora ao Senhor para que tire de nós estas serpentes. Moisés, pois, orou pelo povo.
8 ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
8 Então disse o Senhor a Moisés: Faze uma serpente de bronze, e põe-na sobre uma haste; e será que todo mordido que olhar para ela viverá.
9 ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.
9 Fez, pois, Moisés uma serpente de bronze, e pô-la sobre uma haste; e sucedia que, tendo uma serpente mordido a alguém, quando esse olhava para a serpente de bronze, vivia.
10 ಇಸ್ರೇಲರು ಪ್ರಯಾಣವನ್ನು ಮುಂದುವರಿಸಿ ಓಬೋತ್ ಎಂಬ ಸ್ಥಳದಲ್ಲಿ ಇಳಿದುಕೊಂಡರು.
10 Partiram, então, os filhos de Israel, e acamparam-se em Obote.
11 ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು.
11 Depois partiram de Obote, e acamparam-se em Ije-Abarim, no deserto que está defronte de Moabe, para o nascente.
12 ಬಳಿಕ ಜನರು ಅಲ್ಲಿಂದ ಹೊರಟು ಜೆರೆದ್ ಕಣಿವೆಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು.
12 Dali partiram, e acamparam-se no vale de Zerede.
13 ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.
13 E, partindo dali, acamparam-se além do Arnom, que está no deserto e sai dos termos dos amorreus; porque o Arnom é o termo de Moabe, entre Moabe e os amorreus.
14 ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ,
14 Pelo que se diz no livro das guerras do Senhor: Vaebe em Sufa, e os vales do Arnom,
15 ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ.
15 e o declive dos vales, que se inclina para a situação Ar, e se encosta aos termos de Moabe
16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.
16 Dali vieram a Beer; esse é o poço do qual o Senhor disse a Moisés: Ajunta o povo, e lhe darei água.
17 ಆಗ ಇಸ್ರೇಲರು ಈ ಹಾಡನ್ನು ಹಾಡಿದರು:
17 Então Israel cantou este cântico: Brota, ó poço! E vós, entoai-lhe cânticos!
18 ಪ್ರಧಾನರು ಈ ಬಾವಿಯನ್ನು ತೋಡಿದರು.
18 Ao poço que os príncipes cavaram, que os nobres do povo escavaram com o bastão, e com os seus bordões. Do deserto vieram a Matana;
19 ಬಳಿಕ ಅವರು ಮತ್ತಾನದಿಂದ ನಹಲೀಯೇಲಿಗೆ ಪ್ರಯಾಣ ಮಾಡಿದರು. ಬಳಿಕ ಅವರು ನಹಲೀಯೇಲಿನಿಂದ ಬಾಮೋತಿಗೆ ಪ್ರಯಾಣ ಮಾಡಿದರು.
19 de Matana a Naaliel; de Naaliel a Bamote;
20 ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.
20 e de Bamote ao vale que está no campo de Moabe, ao cume de Pisga, que dá para o deserto.
21 ಇಸ್ರೇಲರು ಸಂದೇಶಕರನ್ನು ಅಮೋರಿಯರ ಅರಸನಾದ ಸೀಹೋನನ ಬಳಿಗೆ ಕಳುಹಿಸಿದರು. ಅವರು ಅರಸನಿಗೆ,
21 Então Israel mandou mensageiros a Siom, rei dos amorreus, a dizer-lhe:
22 “ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿನ್ನ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜ ಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.
22 Deixa-me passar pela tua terra; não nos desviaremos para os campos nem para as vinhas; as águas dos poços não beberemos; iremos pela estrada real até que tenhamos passado os teus termos.
23 ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.
23 Siom, porém, não deixou Israel passar pelos seus termos; pelo contrário, ajuntou todo o seu povo, saiu ao encontro de Israel no deserto e, vindo a Jaza, pelejou contra ele.
24 ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.
24 Mas Israel o feriu ao fio da espada, e apoderou-se da sua terra, desde o Arnom até o Jaboque, até os amonitas; porquanto a fronteira dos amonitas era fortificada.
25 ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು.
25 Assim Israel tomou todas as cidades dos amorreus e habitou nelas, em Hesbom e em todas as suas aldeias.
26 ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.
26 Porque Hesbom era a cidade de Siom, rei dos amorreus, que pelejara contra o precedente rei de Moabe, e tomara da mão dele toda a sua terra até o Arnom.
27 ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ:
27 Pelo que dizem os que falam por provérbios: Vinde a Hesbom! edifique-se e estabeleça-se a cidade de Siom!
28 ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು.
28 Porque fogo saiu de Hesbom, e uma chama da cidade de Siom; e devorou a Ar de Moabe, aos senhores dos altos do Arnom.
29 ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ.
29 Ai de ti, Moabe! perdido estás, povo de Quemós! Entregou seus filhos como fugitivos, e suas filhas como cativas, a Siom, rei dos amorreus.
30 ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು.
30 Nós os asseteamos; Hesbom está destruída até Dibom, e os assolamos até Nofá, que se estende até Medeba.
31 ಹೀಗೆ ಇಸ್ರೇಲರು ಅಮೋರಿಯರ ದೇಶದಲ್ಲಿ ತಮ್ಮ ಪಾಳೆಯ ಹಾಕಿದರು.
31 Assim habitou Israel na terra dos amorreus.
32 ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.
32 Depois Moisés mandou espiar a Jazer, e tomaram as suas aldeias e expulsaram os amorreus que ali estavam.
33 ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.
33 Então viraram-se, e subiram pelo caminho de Basã. E Ogue, rei de Basã, saiu-lhes ao encontro, ele e todo o seu povo, para lhes dar batalha em Edrei.
34 ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.
34 Disse, pois, o Senhor a Moisés: Não o temas, porque eu to entreguei na mão, a ele, a todo o seu povo, e à sua terra; e far-lhe-ás como fizeste a Siom, rei dos amorreus, que habitava em Hesbom.
35 ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.
35 Assim o feriram, a ele e seus filhos, e a todo o seu povo, até que nenhum lhe ficou restando; também se apoderaram da terra dele.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?