Números 30

KAN2010 vs ARIB

Sair da comparação
ARIB Almeida Revisada Imprensa Bíblica
1 ಮೋಶೆಯು ಇಸ್ರೇಲರ ಕುಲಪ್ರಧಾನರಿಗೆ ಹೇಳಿದ್ದೇನೆಂದರೆ: ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ:
1 Depois disse Moisés aos cabeças das tribos dos filhos de Israel: Isto é o que o Senhor ordenou:
2 “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.
2 Quando um homem fizer voto ao Senhor, ou jurar, ligando-se com obrigação, não violará a sua palavra; segundo tudo o que sair da sua boca fará.
3 “ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ,
3 Também quando uma mulher, na sua mocidade, estando ainda na casa de seu pai, fizer voto ao Senhor, e com obrigação se ligar,
4 ಅವಳ ತಂದೆಯು ಅವಳ ಹರಕೆಯನ್ನಾಗಲಿ ಆಣೆಯನ್ನಾಗಲಿ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.
4 e seu pai souber do seu voto e da obrigação com que se ligou, e se calar para com ela, então todos os seus votos serão válidos, e toda a obrigação com que se ligou será válida.
5 ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.
5 Mas se seu pai lho vedar no dia em que o souber, todos os seus votos e as suas obrigações, com que se tiver ligado, deixarão de ser válidos; e o Senhor lhe perdoará, porquanto seu pai lhos vedou.
6 “ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ,
6 Se ela se casar enquanto ainda estiverem sobre ela os seus votos ou o dito irrefletido dos seus lábios, com que se tiver obrigado,
7 ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.
7 e seu marido o souber e se calar para com ela no dia em que o souber, os votos dela serão válidos; e as obrigações com que se ligou serão válidas.
8 ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.
8 Mas se seu marido lho vedar no dia em que o souber, anulará o voto que estiver sobre ela, como também o dito irrefletido dos seus lábios, com que se tiver obrigado; e o senhor lhe perdoará.
9 “ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.
9 No tocante ao voto de uma viúva ou de uma repudiada, tudo com que se obrigar ser-lhe-á válido.
10 “ವಿವಾಹಿತ ಸ್ತ್ರೀಯು ಅಂಥಾ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ,
10 Se ela, porém, fez voto na casa de seu marido, ou se obrigou com juramento,
11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಏನೂ ಹೇಳದಿದ್ದರೆ ಆಕೆಯು ಆ ಹರಕೆಗಳನ್ನೂ ಆಣೆಗಳನ್ನೂ ನೆರವೇರಿಸಬೇಕು.
11 e seu marido o soube e se calou para com ela, não lho vedando, todos os seus votos serão válidos; e toda a obrigação com que se ligou será válida.
12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.
12 Se, porém, seu marido de todo lhos anulou no dia em que os soube, deixará de ser válido tudo quanto saiu dos lábios dela, quer no tocante aos seus votos, quer no tocante àquilo a que se obrigou; seu marido lhos anulou; e o senhor lhe perdoará.
13 ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
13 Todo voto, e todo juramento de obrigação, que ela tiver feito para afligir a alma, seu marido pode confirmá-lo, ou pode anulá-lo.
14 ಆದರೆ ಅವಳ ಗಂಡನು ಅದನ್ನು ಕೇಳಿದ ದಿನದಿಂದ ಅದರ ಬಗ್ಗೆ ಆಕ್ಷೇಪಿಸದಿದ್ದರೆ, ಅವನು ಅವಳ ಎಲ್ಲಾ ಹರಕೆಗಳನ್ನು ಮತ್ತು ಆಣೆಗಳನ್ನು ಸ್ಥಿರಪಡಿಸಿದ್ದಾನೆ. ಯಾಕೆಂದರೆ ಅವನು ಅದರ ಬಗ್ಗೆ ಕೇಳಿದ ದಿನದಂದು ಅವಳಿಗೆ ಏನೂ ಹೇಳಲಿಲ್ಲ.
14 Se, porém, seu marido, de dia em dia, se calar inteiramente para com ela, confirma todos os votos e todas as obrigações que estiverem sobre ela; ele lhos confirmou, porquanto se calou para com ela no dia em que os soube.
15 ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ವಾಗ್ದಾನಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”
15 Mas se de todo lhos anular depois de os ter sabido, ele levará sobre si a iniqüidade dela.
16 ಗಂಡಹೆಂಡತಿಯರ ಬಗ್ಗೆ ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು.
16 Esses são os estatutos que o Senhor ordenou a Moisés, entre o marido e sua mulher, entre o pai e sua filha, na sua mocidade, em casa de seu pai.

Ler em outra tradução

Comparar com outra