Números 9
KAN2010 vs ACF
1 ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 E falou o SENHOR a Moisés no deserto de Sinai, no ano segundo da sua saída da terra do Egito, no primeiro mês, dizendo:
2 “ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು.
2 Celebrem os filhos de Israel a páscoa a seu tempo determinado.
3 ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”
3 No dia catorze deste mês, pela tarde, a seu tempo determinado a celebrareis; segundo todos os seus estatutos, e segundo todos os seus ritos, a celebrareis.
4 ಆದ್ದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು.
4 Disse, pois, Moisés aos filhos de Israel que celebrassem a páscoa.
5 ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.
5 Então celebraram a páscoa no dia catorze do primeiro mês, pela tarde, no deserto de Sinai; conforme a tudo o que o Senhor ordenara a Moisés, assim fizeram os filhos de Israel.
6 ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,
6 E houve alguns que estavam imundos por terem tocado o corpo de um homem morto; e não podiam celebrar a páscoa naquele dia; por isso se chegaram perante Moisés e Arão naquele mesmo dia;
7 “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.
7 E aqueles homens disseram-lhe: Imundos estamos nós pelo corpo de um homem morto; por que seríamos privados de oferecer a oferta do Senhor a seu tempo determinado no meio dos filhos de Israel?
8 ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.
8 E disse-lhes Moisés: Esperai, e eu ouvirei o que o Senhor vos ordenará.
9 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
9 Então falou o Senhor a Moisés, dizendo:
10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.
10 Fala aos filhos de Israel, dizendo: Quando alguém entre vós, ou entre as vossas gerações, for imundo por tocar corpo morto, ou achar-se em jornada longe de vós, contudo ainda celebrará a páscoa ao Senhor.
11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.
11 No mês segundo, no dia catorze à tarde, a celebrarão; com pães ázimos e ervas amargas a comerão.
12 ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
12 Dela nada deixarão até à manhã, e dela não quebrarão osso algum; segundo todo o estatuto da páscoa a celebrarão.
13 ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.
13 Porém, quando um homem for limpo, e não estiver em viagem, e deixar de celebrar a páscoa, essa alma do seu povo será extirpada; porquanto não ofereceu a oferta do Senhor a seu tempo determinado; esse homem levará o seu pecado.
14 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”
14 E, quando um estrangeiro peregrinar entre vós, e também celebrar a páscoa ao Senhor, segundo o estatuto da páscoa e segundo o seu rito assim a celebrará; um mesmo estatuto haverá para vós, assim para o estrangeiro, como para o natural da terra.
15 ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.
15 E no dia em que foi levantado o tabernáculo, a nuvem cobriu o tabernáculo sobre a tenda do testemunho; e à tarde estava sobre o tabernáculo com uma aparência de fogo até à manhã.
16 ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು.
16 Assim era de contínuo: a nuvem o cobria, e de noite havia aparência de fogo.
17 ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.
17 Mas sempre que a nuvem se alçava de sobre a tenda, os filhos de Israel partiam; e no lugar onde a nuvem parava, ali os filhos de Israel se acampavam.
18 ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.
18 Segundo a ordem do Senhor, os filhos de Israel partiam, e segundo a ordem do Senhor se acampavam; todos os dias em que a nuvem parava sobre o tabernáculo, ficavam acampados.
19 ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.
19 E, quando a nuvem se detinha muitos dias sobre o tabernáculo, então os filhos de Israel cumpriam a ordem do Senhor, e não partiam.
20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು.
20 E, quando a nuvem ficava poucos dias sobre o tabernáculo, segundo a ordem do Senhor se alojavam, e segundo a ordem do Senhor partiam.
21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು.
21 Porém, outras vezes a nuvem ficava desde a tarde até à manhã, e quando ela se alçava pela manhã, então partiam; quer de dia quer de noite alçando-se a nuvem, partiam.
22 ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.
22 Ou, quando a nuvem sobre o tabernáculo se detinha dois dias, ou um mês, ou um ano, ficando sobre ele, então os filhos de Israel se alojavam, e não partiam; e alçando-se ela, partiam.
23 ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.
23 Segundo a ordem do Senhor se alojavam, e segundo a ordem do Senhor partiam; cumpriam o seu dever para com o Senhor, segundo a ordem do Senhor por intermédio de Moisés.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?