1 ಯೆಹೋವನೇ, ನೀನು ಬಹುದೂರವಾಗಿರುವುದೇಕೆ?
2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ,
3 ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು.
4 ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು;
5 ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ.
6 ಅವರು, “ನಮ್ಮನ್ನು ಯಾವುದೂ ಕದಲಿಸದು;
7 ಅವರು ಯಾವಾಗಲೂ ಶಪಿಸುತ್ತಾರೆ;
8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು
9 ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ.
10 ಆ ದುಷ್ಟರು ಕುಗ್ಗಿಹೋದವರನ್ನು
11 ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ!
12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು!
13 ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ?
14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ.
15 ಕೆಡುಕರನ್ನು ನಾಶಮಾಡು.
16 ಯೆಹೋವನು ಸದಾಕಾಲವೂ ರಾಜನಾಗಿರುವನು.
17 ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ.
18 ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು.