1 ಯೆಹೋವನನ್ನು ಸ್ತುತಿಸಿರಿ!
2 ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು;
3 ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ!
4 ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು.
5 ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ
6 ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು.
7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ
8 ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು;
9 ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು.
10 ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು!
11 ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.
12 ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು
13 ಆದರೆ ಆತನ ಕಾರ್ಯಗಳನ್ನು
14 ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ
15 ಆತನು ಅವರ ಆಸೆಯನ್ನು ಪೂರೈಸಿದರೂ
16 ಅವರು ಮೋಶೆಯ ಮೇಲೆಯೂ
17 ಭೂಮಿಯು ಬಾಯ್ದೆರೆದು ಹೊಟ್ಟೆಕಿಚ್ಚುಪಟ್ಟ ದಾತಾನನನ್ನೂ
18 ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು;
19 ಹೋರೇಬ್ ಬೆಟ್ಟದ ಬಳಿಯಲ್ಲಿ
20 ಹುಲ್ಲುತ್ತಿನ್ನುವ ಹೋರಿಯ ಮೂರ್ತಿಗಾಗಿ
21 ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು!
22 ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು.
23 ಆತನು ಅವರನ್ನು ನಾಶಮಾಡಬೇಕೆಂದಿದ್ದನು.
24 ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ.
25 ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ
26 ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ
27 ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು.
28 ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು.
29 ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.
30 ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು
31 ಫೀನೆಹಾಸನ ಈ ಕಾರ್ಯವು
32 ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು.
33 ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು.
34 ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು.
35 ಅವರು ಬೇರೆಯವರೊಂದಿಗೆ ಸೇರಿಕೊಂಡು
36 ಅವರು ದೇವಜನರಿಗೆ ಉರುಲಿನಂತಾದರು.
37 ದೇವಜನರು ತಮ್ಮ ಸ್ವಂತ ಮಕ್ಕಳನ್ನೂ
38 ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳನ್ನು
39 ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು.
40 ಆತನು ತನ್ನ ಜನರ ಮೇಲೆ ಕೋಪಗೊಂಡನು;
41 ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು;
42 ಶತ್ರುಗಳು ಅವರನ್ನು ತಮ್ಮ ಅಧೀನದಲ್ಲಿಟ್ಟುಕೊಂಡು
43 ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ
44 ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು;
45 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು.
46 ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು.
47 ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು!
48 ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ.