1 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
6 ನನ್ನ ಪಾಲು ರಮಣೀಯವಾಗಿದೆ.
7 ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.