1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ.
2 ನನಗೆ ಕಿವಿಗೊಡು.
3 ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ
4 ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು.
5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ.
6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು.
7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು.
8 ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ;
9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ;
10 ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ.
11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ;
12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು.
13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ.
14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ.
15 ನನ್ನ ಜೀವವು ನಿನ್ನ ಕೈಗಳಲ್ಲಿದೆ.
16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ.
17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು.
18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ
19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ.
20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ.
21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ
22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು.
23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು!
24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.