1 ನೀತಿವಂತರೆ, ಯೆಹೋವನಲ್ಲಿ ಉಲ್ಲಾಸಪಡಿರಿ.
2 ಲೈರ್ ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ!
3 ಆತನಿಗೆ ಹೊಸ ಹಾಡನ್ನು ಹಾಡಿರಿ!
4 ಯೆಹೋವನ ವಾಕ್ಯವು ಸತ್ಯವಾದದ್ದು!
5 ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು.
6 ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು!
7 ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು;
8 ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ.
9 ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು;
10 ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು;
11 ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ.
12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು.
13 ಯೆಹೋವನು ಪರಲೋಕದಿಂದ
14 ಆತನು ತನ್ನ ಮಹಾಸಿಂಹಾಸನದಿಂದ
15 ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ.
16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ.
17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ.
18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು.
19 ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ.
20 ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ.
21 ದೇವರು ನನ್ನನ್ನು ಸಂತೋಷಗೊಳಿಸುವನು.
22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.