1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ
2 ಅವನು ತನ್ನನ್ನು ವಂಚಿಸಿಕೊಳ್ಳುವನು.
3 ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ.
4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು.
5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ.
6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ.
7 ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ.
8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು.
9 ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು!
10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ.
11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ;
12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ.