1 ಸರ್ವಜನಾಂಗಗಳೇ, ಕೇಳಿರಿ,
2 ಸಾಮಾನ್ಯರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ.
3 ನಾನು ನಿಮಗೆ ಸುಜ್ಞಾನವನ್ನೂ
4 ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ.
5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು?
6 ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ;
7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು.
8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು
9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು
10 ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು.
11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ.
12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು.
13 ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ
14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ.
15 ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು.
16 ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ.
17 ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು.
18 ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ
19 ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು.
20 ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ