1 ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು!
2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು.
3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ.
4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು.
5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು.
6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು.
7 ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ.