1 ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ.
2 ವಾದ್ಯವನ್ನು ನುಡಿಸಲಾರಂಭಿಸಿರಿ;
3 ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ
4 ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ.
5 ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ
6 ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು.
7 ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ.
8 “ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ.
9 ಪರದೇಶದವರು ಆರಾಧಿಸುವ
10 ಯೆಹೋವನಾದ ನಾನೇ ನಿನ್ನ ದೇವರು.
11 “ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ.
12 ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ.
13 ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ,
14 ಅವರ ಶತ್ರುಗಳನ್ನು ಸೋಲಿಸುವೆನು;
15 ಯೆಹೋವನ ಶತ್ರುಗಳು ಭಯದಿಂದ ನಡುಗುವರು.
16 ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು.